ದಾವಣಗೆರೆ, ಡಿ. 25- ಶಸ್ತ್ರಚಿಕಿತ್ಸೆಗೊಳಗಾಗಿರುವ ಹಿರಿಯ ನಟ ಶಿವರಾಜ್ ಕುಮಾರ್ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಜಿಲ್ಲಾ ಆರ್ಯ ಈಡಿಗ ಸಂಘದ ವತಿಯಿಂದ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಸಮಾಜದ ಜಿಲ್ಲಾಧ್ಯಕ್ಷ ಆರ್. ಶಂಕರ್, ಪ್ರಧಾನ ಕಾರ್ಯದರ್ಶಿ ಎ. ನಾಗರಾಜ್ ಸೇರಿದಂತೆ, ಸಂಘದ ಪದಾಧಿಕಾರಿಗಳು, ಈಡಿಗ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿವ ರಾಜ್‌ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಗೆ ಪ್ರಾರ್ಥನೆ
