ಹರಪನಹಳ್ಳಿ, ಡಿ. 26 – ಪಟ್ಟಣದ ಅರಸಿಕೇರೆ ರಸ್ತೆಯ ಬಳಿ ಇರುವ ವಾಲ್ಮೀಕಿ ಸಮೂದಾಯ ಭವನದಲ್ಲಿ ಇದೇ ದಿನಾಂಕ 29 ರಂದು ಬೆಳಿಗ್ಗೆ 10 ಗಂಟೆಗೆ ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಪಾಲ್ಗೋಳ್ಳಲ್ಲಿದ್ದಾರೆ ಎಂದು ವಾಲ್ಮೀಕಿ ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ವೈ.ಡಿ. ಅಣ್ಣಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿದ ಸುದ್ದಿ-ಗೋಷ್ಠಿಯಲ್ಲಿ ಮಾತನಾಡಿ, ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠದಲ್ಲಿ ಮುಂಬರುವ ಫೆ. 8 ಮತ್ತು 9 ರಂದು ಜರುಗಲಿರುವ ವಾಲ್ಮೀಕಿ ಜಾತ್ರೆಯ ಅಂಗವಾಗಿ ರಾಜನಹಳ್ಳಿಯ ವಾಲ್ಮೀಕಿ ಶ್ರೀಗಳು ಪಟ್ಟಣದ ವಾಲ್ಮೀಕಿ ಸಮುದಾಯ ಭವನಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು. .
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಟಿ. ವೆಂಕಟೇಶ, ವಾಲ್ಮೀಕಿ ನಾಯಕ ಸಮಾಜದ ಗೌರವ ಅಧ್ಯಕ್ಷ ಹೆಚ್.ಕೆ. ಹಾಲೇಶ, ಮಾಜಿ ಅಧ್ಯಕ್ಷರಾದ ಕೆ.ಉಚ್ಚೆಂಗೆಪ್ಪ, ಶಿರಹಟ್ಟಿ ದಂಡೆಪ್ಪ, ಪ್ರಧಾನ ಕಾರ್ಯದರ್ಶಿ ಜಿಟ್ಟಿನಕಟ್ಟಿ ಎಚ್.ಕೆ. ಮಂಜುನಾಥ, ಉಪಾಧ್ಯಕ್ಷ ಮಂಡಕ್ಕಿ ಸುರೇಶ, ಪುರಸಭೆ ಸದಸ್ಯ ದ್ಯಾಮಜ್ಜಿ ರೊಕ್ಕಪ್ಪ, ಮುಖಂಡರಾದ ನಿಟ್ಟೂರು ಸಣ್ಣ ಹಾಲಪ್ಪ, ಚಿಕ್ಕೇರಿ ಬಸಪ್ಪ, ಆರ್.ಲೋಕೇಶ್, ಕೆಂಚಪ್ಪ, ಅಜ್ಜಯ್ಯ, ತಳವಾರ ವೆಂಕಟೇಶ, ಪಿ. ವೆಂಕಟೇಶ ಸೇರಿದಂತೆ ಇತರರು ಇದ್ದರು.