ದಾವಣಗೆರೆ, ಜ.2- ವಿನೋಬನಗರದ 1ನೇ ಮೇನ್, 5ನೇ ಕ್ರಾಸ್‌ನಲ್ಲಿ ಅಯ್ಯಪ್ಪ ಸ್ವಾಮಿ ಭಕ್ತ ವೃಂದದ ವತಿಯಿಂದ 12ನೇ ವರ್ಷದ ಅಯ್ಯಪ್ಪ ಸ್ವಾಮಿ ಪಡಿ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.
ಪಾಲಿಕೆ ಸದಸ್ಯ ಎ.ನಾಗರಾಜ್, ಬಿಜೆಪಿ ಮುಖಂಡ ಶ್ರೀನಿವಾಸ ದಾಸಕರಿಯಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ನಂತರ ಅನ್ನ ಸಂತರ್ಪಣೆ ನಡೆಯಿತು.