ದಾವಣಗೆರೆ, ಜ. 27- ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ನಡೆದ ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಯ ಹಲವು ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ತಿಳಿಸಿದ್ದಾರೆ.
ಇಲ್ಲಿಯವರೆಗೂ 2022 ಬ್ಯಾಚ್ನ ಹೊರಹೋಗುವ ವಿದ್ಯಾರ್ಥಿಗಳ ಪೈಕಿ 397 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಇನ್ನೂ ಹಲವು ಪ್ರತಿಷ್ಠಿತ ಕಂಪನಿಗಳು ಬರಲಿದ್ದು ವಿದ್ಯಾರ್ಥಿಗಳಿಗೆ ಅದಕ್ಕೆ ಬೇಕಾದ ತರಬೇತಿಯನ್ನು ನೀಡುತ್ತಿದ್ದೇವೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ ಟಿ.ಆರ್. ಇದೇ ವೇಳೆ ತಿಳಿಸಿದರು.
ಇತ್ತೀಚಿಗೆ ನಡೆದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ಅಮೇರಿಕಾ ಮೂಲದ ಟಾರ್ಗೆಟ್ ಕಾರ್ಪೋರೇಷನ್ ಕಂಪನಿ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ ವಿದ್ಯಾರ್ಥಿನಿ ಕು. ಟಿ.ಯು. ಬಿಂದುಶ್ರೀ ಆಯ್ಕೆಯಾಗಿ ಕಂಪನಿಯ ಅತ್ಯಧಿಕ ಪ್ಯಾಕೇಜ್ ವಾರ್ಷಿಕ 13.3 ಲಕ್ಷ ಗಿಟ್ಟಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಆಡಳಿತಾಧಿಕಾರಿ ವೈ.ಯು. ಸುಭಾಷ್ ಚಂದ್ರ, ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್, ವಿಭಾಗದ ಮುಖ್ಯಸ್ಥ ಡಾ. ಜೆ. ಪ್ರವೀಣ್ ಜೆ, ವಿಭಾಗದ ಸಂಯೋಜಕ ಸಂಪತ್ಕುಮಾರ್ ಅಭಿನಂದಿಸಿದ್ದಾರೆ.