ಮಲೇಬೆನ್ನೂರು, ಫೆ.8- ಪಟ್ಟಣದ ಶ್ರೀಮತಿ ಬಸಮ್ಮ ಕೆಂಚಪ್ಪ ಮಡಿವಾಳರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹೇಶಪ್ಪ ಅವರು ವಯೋ ನಿವೃತ್ತಿ ಹೊಂದಿದ ಕಾರಣ ವಿದ್ಯಾಸಂಸ್ಥೆಯ ಪದಾಧಿಕಾರಿಗಳು ಮತ್ತು ಎಸ್ಡಿಎಂಸಿ ಹಾಗೂ ಶಾಲಾ ಶಿಕ್ಷಕ ವೃಂದದವರು ಸೇರಿ ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.
33 ವರ್ಷಗಳ ಕಾಲ ಈ ಶಾಲೆಯಲ್ಲಿ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ ಎಂದು ಬೀಳ್ಕೊಡುಗೆ ಸ್ವೀಕರಿಸಿದ ಮಹೇಶಪ್ಪ ಅವರು ಭಾವುಕರಾಗಿ ಹೇಳಿದರು.
ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ವಿಜಯರಾಘವ್, ಕಾರ್ಯದರ್ಶಿ ಹೆಚ್.ಜಿ.ಚಂದ್ರಶೇಖರ್, ಸಿಆರ್ಪಿ ರಾಜಪ್ಪ, ಹಳೇ ವಿದ್ಯಾರ್ಥಿ ಸಂಘದ ಎಂ.ಕೆ.ಗಜೇಂದ್ರ ಸ್ವಾಮಿ, ಮುಖ್ಯ ಶಿಕ್ಷಕ ದಂಡಿ ತಿಪ್ಪೇಸ್ವಾಮಿ ಅವರು ಶಿಕ್ಷಕ ಮಹೇಶಪ್ಪ ಅವರ ಸೇವೆಯನ್ನು ಸ್ಮರಿಸಿ, ನಿವೃತ್ತಿ ಜೀವನಕ್ಕೆ ಶುಭ ಕೋರಿದರು.
ಸಂಸ್ಥೆಯ ನಿರ್ದೇಶಕರಾದ ಎಂ.ಆರ್.ಮಾರಪ್ಪ, ಎಂ.ಕೆ.ಶಾಂತಮ್ಮ, ಬೀರಲಿಂಗೇಶ್ವರ ಶಾಲೆಯ ಮುಖ್ಯ ಶಿಕ್ಷಕ ಡಿ.ಕೆ.ಕರಿಬಸಪ್ಪ, ಮಾರುತಿ ಶಾಲೆಯ ಮುಖ್ಯ ಶಿಕ್ಷಕ ಪರಮೇಶ್ವರಪ್ಪ, ಆಶ್ರಯ ಕಾಲೋನಿಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶಶಿಕುಮಾರ್, ಶ್ರೀದೇವಿ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.