ಕೂಡ್ಲಿಗಿ, ಜ.9- ಕೂಡ್ಲಿಗಿ ಬಸ್‌ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ ಎಂದು ವಂದೇ ಮಾತರಂ ಜಾಗೃತಿ ವೇದಿಕೆ ಖಂಡಿಸಿದೆ. ಬಸ್‌ನಿಲ್ದಾಣದಲ್ಲಿ ಸಂಪೂರ್ಣ ನಿರ್ವಹಣೆ ಇಲ್ಲವಾಗಿದೆ. ಡಿಪೋ ವ್ಯವಸ್ಥಾಪಕರ ನಿರ್ಲಕ್ಷ್ಯ ಧೋರಣೆ ಹಾಗೂ ಅಮಾನವೀಯ ನಡೆಗೆ ಸಾರ್ವಜನಿಕ ವಲಯದಿಂದ ತೀವ್ರ ಖಂಡನೆ ವ್ಯಕ್ತವಾಗಿದ್ದು, ಜಿಲ್ಲಾಧಿಕಾರಿಗಳು ಶೀಘ್ರವೇ ಪರಿಶೀಲಿಸಿ, ಸಂಬಂಧ ಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸುವಂತೆ ಆಗ್ರಹಿಸಿದ್ದಾರೆ.
February 6, 2025