ದಾವಣಗೆರೆ, ಜ.11- ಬಿಜೆಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ನಗರದ ಡಾ. ಎಂ.ಸಿ. ಮೋದಿ ವೃತ್ತದಿಂದ ಶ್ರೀ ಜಯದೇವ ಮುರುಘರಾಜೇಂದ್ರ ವೃತ್ತದವರೆಗೆ `ಏಕತಾ ನಡಿಗೆ’ ಯನ್ನು ಸಂಸದ ಜಿ.ಎಂ. ಸಿದ್ದೇಶ್ವರ ನೇತೃತ್ವದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಂದೀಶ್, ಜಿಲ್ಲಾ ಅಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವಪ್ರಕಾಶ್, ಮಾಜಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಮಹಿಳಾ ಮೋರ್ಚಾದ ಅಧ್ಯಕ್ಷರಾದ ಮಂಜುಳಾ ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಸವಿತಾ ರವಿಕುಮಾರ್, ಯಲ್ಲೇಶ್, ಸಚಿನ್, ವಿನಯ್, ಕಿರಣ್, ಗುರುರಾಜ್, ರಾಕೇಶ್, ತರಕಾರಿ ಶಿವು, ತಿಲಕ್ ಉಪಸ್ಥಿತರಿದ್ದರು.