ರೋಗ-ರುಜಿನ ತಡೆಗಟ್ಟಲು ಶುದ್ಧ ನೀರನ್ನು ಬಳಸಲು ಕರೆ

ಹೊನ್ನಾಳಿ, ಜ.11- ಶುದ್ಧ ಕುಡಿಯುವ ನೀರು ಬಳಕೆಯಿಂದ ಅನೇಕ ರೋಗ-ರುಜಿನಗಳನ್ನು ತಡೆಗಟ್ಟಬಹುದು ಎಂದು ರಾಜ್ಯ ಮಾನವ ಹಕ್ಕುಗಳ ಸಮಿತಿಯ ರಾಜ್ಯಾಧ್ಯಕ್ಷ ಕೆ. ನಾಗರಾಜ್ ಹೇಳಿದರು.

ಗೋವಿನಕೋವಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ರಾಜ್ಯ ಮಾನವ ಹಕ್ಕುಗಳ ಸಮಿತಿ ವತಿಯಿಂದ ಕುಡಿಯುವ ನೀರಿನ ಫಿಲ್ಟರ್ ಹಾಗೂ ಡ್ರಮ್ ವಿತರಿಸಿ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳ ಆರೋಗ್ಯದ ಬಗ್ಗೆ ಕಾರ್ಯಕರ್ತೆಯರು-ಸಹಾಯಕಿಯರು ಹಾಗೂ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ರಾಜ್ಯ ಮಾನವ ಹಕ್ಕುಗಳ ಕಮಿಟಿಯ ಸಂಸ್ಥಾಪಕ ಅಧ್ಯಕ್ಷ ಸಿ.ಎಂ. ಭೈರೇಗೌಡ, ರಾಜ್ಯ ಉಪಾಧ್ಯಕ್ಷ ಎಸ್.ಕೆ. ಗಜೇಂದ್ರಸ್ವಾಮಿ, ಶಿವಮೊಗ್ಗ ಜಿಲ್ಲಾ ಗೌರವಾಧ್ಯಕ್ಷ ಎಸ್. ರಮೇಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಮಾಲ ಶೆಟ್ಟಿ, ಕಾರ್ಯಾಧ್ಯಕ್ಷೆ ಸುಜಾತ, ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ, ಉಷಾ ಉತ್ತಪ್ಪ, ಪರ್ವೀನ್, ಪ್ರಧಾನ ಕಾರ್ಯದರ್ಶಿಗಳಾದ ಎಸ್.ಎಲ್. ವಿನೋದ್, ಶಾಂತಮ್ಮ, ಮಧು, ನ್ಯಾಮತಿ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಗೋವಿನಕೋವಿ ಸವಿತಾ ಮತ್ತಿತರರು ಉಪಸ್ಥಿತರಿದ್ದರು.

error: Content is protected !!