ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ಮಹಿಳಾ ಒಕ್ಕೂಟದ ಒತ್ತಾಯ

ಹರಪನಹಳ್ಳಿ, ಜ.12- ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಬಡತನದಲ್ಲಿ ಬದುಕುತ್ತಿ ರುವ ಎಷ್ಟೋ ಕುಟುಂಬಗಳು ಬೀದಿಗೆ ಬಂದು ತಮ್ಮ ಅಳಲನ್ನು ತೋಡಿಕೊಂಡು ಜೀವನ ಮಾಡುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಒತ್ತಾಯಿಸಿ ಪಟ್ಟಣದ ಅಬಕಾರಿ ಇಲಾಖೆ ಕಛೇರಿಗೆ ತೆರಳಿದ ಮಹಿಳೆಯರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. 

ರಾಜ್ಯ ಮಹಿಳಾ ಘಟಕದ ತೊಗರಿಕಟ್ಟಿ ಭಾಗ್ಯಮ್ಮ ಹಾಗೂ ಶೃತಿ ಮಾತನಾಡಿ,  ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ 150 ರೂ. ಕೂಲಿ ಕೆಲಸದಿಂದ ಜೀವನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಒಂದೊತ್ತಿನ ಊಟಕ್ಕೂ  ಪರದಾಡುತ್ತಿರುವ ಕೆಲ ಕುಟುಂಬಗಳು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ 100 ರೂ.  ಕೊಟ್ಟು ಮದ್ಯ ಸೇವಿಸಿದರೆ ಕುಟುಂಬದ ಜೀವನ ಯಾವ ರೀತಿ ಮಾಡುವುದಕ್ಕೆ ಸಾಧ್ಯವಾಗುತ್ತದೆ. ಆದ್ದರಿಂದ ಅಧಿಕಾರಿಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು.

error: Content is protected !!