ಹರಿಹರ, ಜ.12- ಸ್ವಾಮಿ ವಿವೇಕಾನಂದರ 158ನೇ ಜಯಂತಿ ಹಾಗೂ ರಾಷ್ಟ್ರೀಯ ಯುವಕರ ದಿನಾಚರಣೆ ಯನ್ನು `ನನ್ನ ಊರು ನನ್ನ ಹೊಣೆ’ ಬಳಗದ ವತಿಯಿಂದ ನಗರದ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದ ಹಿಂಭಾಗದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿಯನ್ನು ಸ್ವಚ್ಛಗೊಳಿಸುವ ಮೂಲಕ ಆಚರಿಸಿದರು.
ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ನಗರಸಭೆ ಆಯುಕ್ತ ಉದಯ ಕುಮಾರ್ ಹಾಗೂ ನಗರಸಭೆ ಸದಸ್ಯರು `ನನ್ನ ಊರು ನನ್ನ ಹೊಣೆ’ ಬಳಗದ ಸದಸ್ಯರು ಈ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.