ದಾವಣಗೆರೆ, ಜ.16- ತಾಲ್ಲೂಕಿನ ಎಲೆಬೇತೂರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಂಜೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕ್ರಮ ನಡೆಯಿತು.
ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಹಚ್ಚಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆರ್ಎಸ್ಎಸ್ ನ ಕೃಷ್ಣಪ್ರಸಾದ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ದಶಕಗಳ ಕನಸು ಇದೀಗ ನೆರವೇರುತ್ತಿದ್ದು, ಇದಕ್ಕೆ ಎಲ್ಲರೂ ಕೈಜೋಡಿಸೋಣ ಎಂದರು. ನಿಧಿ ಸಂಗ್ರಹ ಕಾರ್ಯಕ್ರಮ ಜನವರಿ 15 ರಿಂದ ಫೆಬ್ರವರಿ 5ನೇ ತಾರೀಖಿನ ತನಕ ನಡೆಯುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ, ಶ್ರೀರಾಮನ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸಲಾಗುವುದು. ಈ ಕಾರ್ಯಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ತಿಳಿಸಿದರು. ಕೊನೆಯಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸಾರ್ವಜನಿಕರಿಗೆ ಎಳ್ಳು-ಬೆಲ್ಲ ವಿತರಿಸಲಾಯಿತು.