ಹರಪನಹಳ್ಳಿ, ಜ.24- ಸಂಸದ ಜಿ.ಎಂ.ಸಿದ್ದೇಶ್ವರ ಅವರ ಪುತ್ರ ಜಿ.ಎಸ್.ಅನಿತ್ ಕುಮಾರ್ ಅವರು ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹಿಸಿದರು.
ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಮಂದಿರ ನಿರ್ಮಾಣಕ್ಕಾಗಿ ಹರಪನಹಳ್ಳಿ ಪಟ್ಟಣದ ವಿವಿಧ ಸ್ಥಳಗಳಲ್ಲಿ ಅನಿತ್ ಕುಮಾರ್ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹಿಸುವ ಮೂಲಕ ಅಭಿಯಾನದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎಂ.ಪಿ.ನಾಯ್ಕ, ನಂಜನಗೌಡ್ರು, ಓಂಕಾರ ಗೌಡ, ಡಾ|| ರಮೇಶ್, ಮಂಡಲ ಅಧ್ಯಕ್ಷ ಸತ್ತೂರ್ ಹಾಲೇಶ್, ಪುರಸಭೆ ಅಧ್ಯಕ್ಷ ಮಂಜುನಾಥ್, ಪಕ್ಷದ ಪದಾಧಿಕಾರಿಗಳಾದ ಪೂಜಾರ್ ಚಂದ್ರು, ರವಿ ನಾಯ್ಕ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.