ಕೂಡ್ಲಿಗಿ, ಜ.24 – ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ಎಸ್.ಸಿ. ಹಾಗೂ ಎಸ್.ಟಿ. ಕಾಲೋನಿಗಳಲ್ಲಿ ರೂ. 1 ಕೋಟಿ 15 ಲಕ್ಷ ರೂ. ಮೊತ್ತದ ರಸ್ತೆ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನನಾಡಿದ ಅವರು, ಹಳ್ಳಿಗಳ ಅಭಿವೃದ್ಧಿಯೇ ನನ್ನ ಪ್ರಥಮ ಆದ್ಯತೆ ಎಂದರು. ಪಿಡಬ್ಲ್ಯೂಡಿ ಇಲಾಖೆಯ ಇಂಜಿನಿಯರ್ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಕೆ. ಚನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.
January 4, 2025