ಮಲೇಬೆನ್ನೂರು, ಜ.25- ಪಟ್ಟಣದಲ್ಲಿ ವಾಸವಾಗಿರುವ ನಿವೇಶನ ರಹಿತರಿಗೆ ನಿವೇಶನಗಳನ್ನು ಒದಗಿಸುವಂತೆ ಆಗ್ರಹಿಸಿ ಕನ್ನಡ ರಕ್ಷಣಾ ಸಮಿತಿಯ ಮಹಿಳಾ ವಿಭಾಗದ ಕಾರ್ಯಕರ್ತರು ಇಲ್ಲಿನ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬಡವರಿಗೆ ತಕ್ಷಣವೇ ನಿವೇಶನ ಸಹಿತ ಮನೆಗಳನ್ನು ಕಟ್ಟಿಕೊಡುವ ಬಗ್ಗೆ ಗಮನ ಹರಿಸುವಂತೆ ಪುರಸಭೆ ಅಧ್ಯಕ್ಷರಾದ ಶ್ರೀಮತಿ ನಾಹೀದಾ ಅಂಜುಂ ಸೈಯದ್ ಇಸ್ರಾರ್, ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್ ಅವರಿಗೆ ನೀಡಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಧರಣೇಂದ್ರಕುಮಾರ್ ಅವರು ಈ ಕುರಿತು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುವುದೆಂದರು. ಯಶೋ ಧಮ್ಮ, ಚಂದ್ರಮ್ಮ, ಸುಂದ್ರಮ್ಮ, ರಂಜಿತ, ಸುನೀತ, ಪುಷ್ಪಾ, ರತ್ನಮ್ಮ, ಶೋಭಾ, ದೀಪಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.