ದಾವಣಗೆರೆ, ಏ.4- ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕೆಂಗಬಾಲಯ್ಯ, ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ಎನ್. ಬಡಿಗೇರ್ ನಿನ್ನೆ ಕೋವಿಡ್ ಲಸಿಕೆ ಪಡೆದರು. ಲಸಿಕೆ ಪಡೆದ ನಂತರ ಮಾತನಾಡಿದ ಜಿಲ್ಲಾ ನ್ಯಾಯಾಧೀಶರಾದ ಗೀತಾ ಅವರು ಲಸಿಕೆ ಕೋವಿಡ್ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಸಹಕಾರಿಯಾಗಿದೆ. ಲಸಿಕೆಯಿಂದಾಗುವ ಲಾಭಗಳು ಸಾಕಷ್ಟಿವೆ. ಲಸಿಕೆ ಪಡೆದರೆ ಕೋವಿಡ್ ಬಂದರೂ ಅದರಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳು ಮತ್ತು ಮರಣವನ್ನು ತಪ್ಪಿಸಬಹುದು. ನಾವು ಲಸಿಕೆ ಪಡೆದಿದ್ದೇವೆ. ಲಸಿಕೆ ಪಡೆಯಲು ಅರ್ಹರಿರುವ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳಾದ ಶ್ರೀನಿವಾಸ್, ಶ್ರೀಧರ್ ಹಾಗೂ ಸಿಬ್ಬಂದಿ ಸಹ ಲಸಿಕೆ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ರೇವಣ್ಣ ಅವರು ಕೂಡಾ ಲಸಿಕೆ ಪಡೆದರು.
December 26, 2024