ದಾವಣಗೆರೆ, ಏ.5- ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಟೆಕ್ಸಾಕ್ ಸಹಯೋಗದಲ್ಲಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಿದೆ.
ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ವಹಿಸಿದ್ದರು. ಸಂಯೋಜನಾಧಿಕಾರಿ ಕೆ.ಎಸ್. ನಾಗರಾಜ್ ತರಬೇತಿ ಉದ್ದೇಶವನ್ನು ತಿಳಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಸಿ.ವಿ. ಶ್ರೀನಿವಾಸ್, ಸಂಸ್ಥೆಯ ತರಬೇತಿ ಮತ್ತು ಉದ್ಯೋಗಾಧಿಕಾರಿ ತೇಜಸ್ವಿ ಕಟ್ಟೀಮನಿ ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು. ಸಹ ಪ್ರಾಧ್ಯಾಪಕ
ಎಂ.ಎಸ್. ಮಲ್ಲಿಕಾರ್ಜುನ ಕಾರ್ಯಕ್ರಮ ಆಯೋಜಿಸಿದ್ದರು.