ದಾವಣಗೆರೆ, ಫೆ.4- ತಾಲ್ಲೂಕಿನ ಹೆಮ್ಮನಬೇತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಿ.ಎಸ್ ಕಾಳಮ್ಮ, ಉಪಾಧ್ಯಕ್ಷರಾಗಿ ಯಶೋಧಮ್ಮ ರೇವಣಸಿದ್ದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಸದಸ್ಯರುಗಳಾದ ಯು.ಜಿ ಶಿವಕುಮಾರ್ ಜಯ್ಯಪ್ಪ ಎಸ್.ವಿ ಮಲ್ಲಿಕಾರ್ಜುನ್, ಸಿದ್ದೇಶ್ ಬಣಕಾರ್, ಪ್ರಕಾಶ್, ಮುಖ್ಯ ಕಾರ್ಯನಿರ್ವಾಹಕರಾಗಿ ಯು.ಎಂ ಅಜಯ್ ಮತ್ತಿತರರು ಉಪಸ್ಥಿತರಿದ್ದರು. ಚುನಾವಣಾ ಅಧಿಕಾರಿಯಾಗಿ ಜಯಪ್ರಕಾಶ್ ಕಾರ್ಯ ನಿರ್ವಹಿಸಿದರು.
December 27, 2024