ಚಳ್ಳಕೆರೆ : ಪಲ್ಸ್‌ ಪೋಲಿಯೋಗೆ ಶಾಸಕ ಟಿ. ರಘುಮೂರ್ತಿ ಚಾಲನೆ

ಚಳ್ಳಕೆರೆ, ಫೆ.4- ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ ನೀಡಿದರು. ಡಿಎಚ್‌ಒ ಓ. ಪ್ರೇಮಸುಧ ಮಾತನಾಡಿದರು. 

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಸಿ.ಬಿ. ಜಯಲಕ್ಷ್ಮಿ, ಉಪಾಧ್ಯಕ್ಷೆ ಜೈತುನ್‌ಬೀ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಸಮರ್ಥರಾಯ್, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ವೆಂಕಟೇಶ್, ಆರೋಗ್ಯ ಅಧಿಕಾರಿ ತಿಪ್ಪೇಸ್ವಾಮಿ, ಪ್ರಸನ್ನಕುಮಾರ್, ಗೀತಾಬಾಯಿ ಆರೋಗ್ಯ  ಮತ್ತಿತರರು ಹಾಜರಿದ್ದರು.

error: Content is protected !!