ಜಗಳೂರು, ಫೆ.7- ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಣ್ವಕುಪ್ಪಿ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಶ್ರೀರಾಮ ನಿಧಿ ಸಮರ್ಪಣಾ ಅಭಿಯಾನಕ್ಕೆ ಭಾನುವಾರ ದೇಣಿಗೆ ನೀಡಿದ್ದಾರೆ. ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್.ಶಿವಯೋಗಿಸ್ವಾಮಿ, ಆರ್.ಎಸ್.ಎಸ್. ಸಾಮರಸ್ಯ ವೇದಿಕೆ ರಾಜ್ಯ ಸಹ ಸಂಯೋಜಕ ಗು.ರುದ್ರಯ್ಯ, ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರೂ ಆದ ದಾವಣಗೆರೆಯ ಶ್ರೀ ಸೋಮೇಶ್ವರ ವಿದ್ಯಾಲಯದ ಗೌರವ ಕಾರ್ಯದರ್ಶಿ ಕೆ.ಎಂ. ಸುರೇಶ್, ಹಾವೇರಿ ಜಿಲ್ಲಾ ಬಿಜೆಪಿ ಉಸ್ತು ವಾರಿ ಎಲ್.ಎನ್. ಕಲ್ಲೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
April 4, 2025