ದಾವಣಗೆರೆ, ಫೆ. 7 – ದಾವಣಗೆರೆ-ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎನ್.ಎ. ಮುರುಗೇಶ್ ಅವರು ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವರಾಜ್ ಪಾಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೆ.ಎಸ್. ವೇಣುಗೋಪಾಲ ರೆಡ್ಡಿ, ಉಪಾಧ್ಯಕ್ಷ ಬಿ. ಶೇಖರಪ್ಪ, ನಿರ್ದೇಶಕ ಜಗದೀಶಪ್ಪ ಬಣಕಾರ್ ಮತ್ತಿತರರು ಉಪಸ್ಥಿತರಿದ್ದರು.