ದಾವಣಗೆರೆ, ಫೆ.8- ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜನತಾ ಬಜಾರ್ ಇವರ ಜಂಟಿ ಆಶ್ರಯದಲ್ಲಿ ಜನತಾ ಬಜಾರ್ ಸಭಾಂಗಣದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನೂತನ ಅಧ್ಯಕ್ಷ ಜೆ.ಎಸ್. ವೇಣುಗೋಪಾಲ್ ರೆಡ್ಡಿ, ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕಿಗೆ ನೂತನ ನಿರ್ದೇಶಕ ಜಗದೀಶಪ್ಪ ಬಣಕಾರ್, ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನೂತನ ನಿರ್ದೇಶಕ ಕೋಗುಂಡಿ ಬಕ್ಕೇಶಪ್ಪ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.ಯೂನಿಯನ್ ಅಧ್ಯಕ್ಷ ಎನ್.ಎ ಮುರುಗೇಶ್, ಜನತಾ ಬಜಾರ್ ಅಧ್ಯಕ್ಷ ಬಿ.ವಿ. ಚಂದ್ರಶೇಖರ್ ಉಪಸ್ಥಿತರಿದ್ದರು.
December 30, 2024