ದಾವಣಗೆರೆ, ಏ. 14- ನಗರದ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಾಗನೂರು ಬಸಪ್ಪ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಅಕ್ಷಿತಾ ಜಿ.ವಿ. ಇವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಪ್ರಸಾದ್ ಬಂಗೇರ ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಗನೂರು ಬಸಪ್ಪ ಪ.ಪೂ ಕಾಲೇಜಿನ ಪೋಷಕರಾದ ಎನ್.ಇ. ಲಿಂಗರಾಜ್, ಕೆ.ಇ. ಜಯಚಾರಿ, ಕಾಲೇಜಿನ ನಿರ್ದೇಶಕ ಡಾ. ಜಿ.ಎನ್. ಎಚ್. ಕುಮಾರ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಹಾಗೂ ಕನ್ನಡ ಉಪನ್ಯಾಸಕ ಎಂ.ಆರ್. ಹರೀಶ್ ಉಪಸ್ಥಿತರಿದ್ದರು.