ದಾವಣಗೆರೆ ಫೆ.13- ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಕಬ್ ಮಾಸ್ಟರ್, ಫ್ಲಾಕ್ ಲೀಡರ್, ಸ್ಕೌಟ್ ಮಾಸ್ಟರ್ ಹಾಗೂ ಗೈಡ್ ಕ್ಯಾಪ್ಟನ್‍ಗಳ ಸಮಾವೇಶವು ನಗರದ ರೋಟರಿ ಬಾಲಭವನದಲ್ಲಿ ಕಳೆದ ವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಭಾಗವಹಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರ ಜೆ.ಚಿಗಟೇರಿ ವಹಿಸಿದ್ದರು.
April 12, 2025