ಮಲೇಬೆನ್ನೂರು, ಜು.6 – ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು ಇಂದು ಬೆಳಿಗ್ಗೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿ, ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ನಂತರ ಶ್ರೀಗಳು ಪಾಟೀಲ್ ಅವರನ್ನು ಶ್ರೀಮಠದಿಂದ ಸನ್ಮಾನಿಸಿ, ಗೌರವಿಸಿದರು.
ಸಮಾಜದ ಮುಖಂಡ ಸಣ್ಣತಮ್ಮಪ್ಪ ಬಾರ್ಕಿ, ಜಿ.ಪಂ. ಮಾಜಿ ಸದಸ್ಯ ಎಂ.ನಾಗೇಂದ್ರಪ್ಪ ಮತ್ತಿತರರು ಈ ವೇಳೆ ಹಾಜರಿದ್ದರು. ಇದಕ್ಕೂ ಮುನ್ನ ಪಾಟೀಲ್ ಅವರು ಬೆಳ್ಳೂಡಿ ಮಠಕ್ಕೆ ತೆರಳಿ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿಯನ್ನು ಭೇಟಿ ಮಾಡಿದ್ದರು.