ದಾವಣಗೆರೆ, ಏ. 16 – ನಗರದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಜಿಲ್ಲಾ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಪ್ರಧಾನ ಕಾರ್ಯ ದರ್ಶಿಗಳಾದ ಬಿ.ಎಸ್. ಜಗದೀಶ್, ಸೊಕ್ಕೆ ನಾಗರಾಜ್, ರಾಜ್ಯ ಪ್ರಕೋಷ್ಠದ ಸಹ ಪ್ರಮುಖ್ ಡಾ. ಎ.ಹೆಚ್. ಶಿವಯೋಗಿ ಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಮಂಜಾ ನಾಯ್ಕ, ಶಿವರಾಜ್ ಪಾಟೀಲ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ ಮಹೇಶ್, ಎಸ್ಸಿ ಮೋರ್ಚಾ ಅಧ್ಯಕ್ಷರಾದ ಹನುಮಂತನಾಯ್ಕ, ಯುವ ಮೋರ್ಚಾ ಅಧ್ಯಕ್ಷರಾದ ಶಿವಪ್ರಕಾಶ್, ಲಿಂಗರಾಜು ಹೆಚ್.ಎಸ್., ಜಿಲ್ಲಾ ಖಜಾಂಚಿ ಬಾತಿ ವೀರೇಶ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಗೌಳಿ ಲಿಂಗರಾಜು, ಜಿಲ್ಲಾ ಮಾಧ್ಯಮ ಸಂಚಾಲಕ ವಿಶ್ವಾಸ್ ಹೆಚ್.ಪಿ. ಜಿಲ್ಲಾ ಓಬಿಸಿ ಅಧ್ಯಕ್ಷ ಬಸವರಾಜಪ್ಪ, ಮಾಯಕೊಂಡ ಅಧ್ಯಕ್ಷ ದೇವೇಂದ್ರಪ್ಪ ಶ್ಯಾಗಲೆ ಮತ್ತು ಪಕ್ಷದ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.