ಹರಿಹರ, ಫೆ.13- ಸ್ಥಳೀಯ ಸಂತ ಅಲೋಶಿ ಯಸ್ ಕಾಲೇಜು ಆಶ್ರಯದಲ್ಲಿ ಜಿಲ್ಲಾ ಪೊಲೀಸ್ ಹಾಗೂ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಸಹಭಾಗಿತ್ವದಲ್ಲಿ ರಸ್ತೆ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ನರಸಿಂಹ ವಿ. ತಾಮ್ರಧ್ವಜ, ಹರಿಹರ ವೃತ್ತ ನಿರೀಕ್ಷಕ ಸತೀಶ್ ಕುಮಾರ್ ಮಾತನಾಡದರು. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ರವಿಕುಮಾರ್, ಪ್ರಾಂಶುಪಾಲ ಸನ್ನ ಗುಡಿನೋ ಮತ್ತಿತರರು ಉಪಸ್ಥಿತರಿದ್ದರು.