ಜಿಲ್ಲಾಡಳಿತದಿಂದ ಶ್ರೀ ಸಂತ ಸೇವಾಲಾಲ್ ಜಯಂತಿ ಸರಳ ಆಚರಣೆ

ದಾವಣಗೆರೆ, ಫೆ.15- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. 

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕೆ.ವಿ ಶಾಂತಕುಮಾರಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಸಮಾಜದ ಮುಖಂಡರಾದ ಮಂಜಾನಾಯ್ಕ ಮತ್ತಿತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

error: Content is protected !!