ದಾವಣಗೆರೆ, ಫೆ.12- ಬೆಂಗಳೂರಿನಲ್ಲಿ ಶಿಕ್ಷಣ ಮಂತ್ರಿಗಳ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ವರ್ಷದ ಬಜೆಟ್ನಲ್ಲಿ ಬಿಸಿಯೂಟ ತಯಾರಿಕರಿಗೆ ವೇತನ ಹೆಚ್ಚಳ ಮಾಡಬೇಕೆಂದು ಎಐಟಿಯುಸಿ ಬಿಸಿಯೂಟ ತಯಾರಕರ ಫೆಡರೇಷನ್ ಪದಾಧಿಕಾ ರಿಗಳ ಜೊತೆ ಚರ್ಚಿಸಿದರು. ವೇತನ ಹೆಚ್ಚಳ ಕುರಿತು ಮುಖ್ಯ ಮಂತ್ರಿ ಗಳನ್ನು ಭೇಟಿ ಮಾಡಿ ಎಂದು ಶಿಕ್ಷಣ ಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ್, ರಾಜ್ಯ ಪ್ರಧಾನ ಕಾರ್ಯ ದರ್ಶಿ ಆವರಗೆರೆ ಚಂದ್ರು, ಎಐಟಿಯುಸಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಲಹೆಗಾರ ಎನ್. ಶಿವಣ್ಣ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.