ದಾವಣಗೆರೆ, ಏ.18- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ನಗರದ ಎಂ.ಇ.ಎಸ್. ಕಾನ್ವೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕೇಂದ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ಗಾಯತ್ರಿ ನೇತೃತ್ವದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಉಚಿತ ಕೋವಿಡ್ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಪ್ರದೀಪ್, ಆಡಳಿತಾಧಿಕಾರಿ ಹೆಚ್.ಎಂ. ಜಯಣ್ಣ, ಬಿ.ಇಡಿ. ಪ್ರಾಂಶುಪಾಲ ಆರ್.ಎಸ್. ಸುರೇಶ್ ಹಾಗೂ ಕಾನ್ವೆಂಟ್‌ನ ಮುಖ್ಯ ಶಿಕ್ಷಕ ಕೆ.ಎಂ. ರಾಜಶೇಖರ ಮತ್ತು ಶಾಲಾ ಸಿಬ್ಬಂದಿಗಳು ಹಾಜರಿದ್ದರು.