ದಾವಣಗೆರೆ, ಜು.10- ನಗರದ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತದ ಸಹಯೋಗ ದೆೋಂದಿಗೆ ಉಚಿತ ಲಸಿಕಾ ಶಿಬಿರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್.ಬಿ. ಅರವಿಂದ್ ಹಾಗೂ ಕಾಲೇಜಿನ ನಿರ್ದೇಶಕ ಪ್ರೊ. ವೈ. ವೃಷಭೇಂದ್ರಪ್ಪ ಶಿಬಿರಕ್ಕೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್, ಆರೋಗ್ಯ ಇಲಾಖೆಯ ಡಾ. ವೆಂಕಟೇಶ್,
ಡಾ. ಮೀನಾಕ್ಷಿ, ಡಾ. ನೇತಾಜಿ ಮತ್ತಿತರರು ಉಪಸ್ಥಿತರಿದ್ದರು.
January 12, 2025