ದಾವಣಗೆರೆ, ಏ.25- ಜಿಲ್ಲೆಯ ಕಿಸಾನ್ ಕಾಂಗ್ರೆಸ್ ಘಟಕದಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ರಕ್ತದಾನ ಮಾಡಿದರು. ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಗಂಗಾ ಬಸವರಾಜ್, ಪಾಲಿಕೆ ಮಾಜಿ ಸದಸ್ಯ ದಿನೇಶ್ ಕೆ. ಶೆಟ್ಟಿ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ರಾಜ್ಯ ಕಾರ್ಯದರ್ಶಿ ಮುಜಾಹಿದ, ರಾಘವೇಂದ್ರ, ಪವನ್ ಹಾಗು ಇನ್ನಿತರರಿದ್ದರು.
ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಮಾತನಾಡಿ, ಎಲ್ಲರೂ ರಕ್ತದಾನ ಮಾಡಬೇಕು. ನಿಯಮಿತವಾದ ರಕ್ತದಾನ ಆರೋಗ್ಯಕ್ಕೆ ಒಳ್ಳೆಯದು. ಹಾಗೆ ಯಾರಿಗಾದರೂ ತುರ್ತಾಗಿ ರಕ್ತ ಬೇಕಿದ್ದರೆ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಸದಾ ಸಿದ್ಧ ಎಂದು ತಿಳಿಸಿದರು.
January 15, 2025