ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ತಿಳಿಸಲು ಶಾಸಕರಿಗೆ ಮುಗಿಬಿದ್ದ ಗ್ರಾಮಸ್ಥರು
ಹೊನ್ನಾಳಿ, ಫೆ.23- ತಾಲ್ಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಾಸಕ ಎಂ.ಪಿ. ರೇಣುಕಾಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮ ವಾಸ್ತವ್ಯ ಸರ್ಕಾರಿ ಕಾರ್ಯಕ್ರಮಕ್ಕಷ್ಟೇ ಸೀಮಿತ ವಾಗದೆ ಜನರ ಕಾರ್ಯಕ್ರಮ ಆಗಬೇಕು ಎಂದರು. ಕೊರೊನಾ ಬಗ್ಗೆ ಜಾಗರೂಕರಾಗಿರಿ ಎಂದು ಕಿವಿಮಾತು ಹೇಳಿದರು.
ಜಿ.ಪಂ. ಸದಸ್ಯೆ ದೀಪಾ ಜಗದೀಶ್ ಮಾತನಾಡಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಸೇರಿದಂತೆ ಇತರೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ಜಾತಿ-ಆದಾಯ ಪ್ರಮಾಣ ಪತ್ರ ವಿತರಣೆ ಸರಳೀಕರಣವಾಗಬೇಕು ಎಂದರು.
ತಹಶೀಲ್ದಾರ್ ಬಸನಗೌಡ ಕೋಟೂರ ಮಾತನಾಡಿ, ಇಂದಿನ ಗ್ರಾಮ ವಾಸ್ತವ್ಯದಲ್ಲಿ 131 ಅರ್ಜಿ ಸಲ್ಲಿಕೆಯಾಗಿದ್ದು, ಇದರಲ್ಲಿ ಅತಿಹೆಚ್ಚು 94 ನಿವೇಶನಗಳನ್ನು ಕೋರಿ ಅರ್ಜಿ ಸಲ್ಲಿಕೆಯಾಗಿವೆ. 20 ಕಂದಾಯ ಇಲಾಖೆ, 6 ಸರ್ವೇ, 101 ಕೂಲಂಬಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಅರ್ಜಿಗಳು ಸಲ್ಲಿಕೆಯಾಗಿವೆ ಎಂದರು.
ಶಾಸಕರು ಸಮಾರಂಭದಿಂದ ನಿರ್ಗಮಿಸುವ ವೇಳೆ ಅರ್ಜಿ ಸಲ್ಲಿಸಿದ ಕೂಲಂಬಿ ಗ್ರಾಮಸ್ಥರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ತಿಳಿಸಲು ಮುಗಿಬಿದ್ದ ಪ್ರಸಂಗ ನಡೆಯಿತು.
ಕೂಲಂಬಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಾರದಮ್ಮ ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ಎಸ್. ಸೋಮಶೇಖರಪ್ಪ, ತಾ.ಪಂ. ಸದಸ್ಯೆ ಅಂಬುಜಾಕ್ಷಿ ಮರುಳಸಿದ್ದಪ್ಪ, ಕೂಲಂಬಿ ಗ್ರಾ.ಪಂ. ಉಪಾಧ್ಯಕ್ಷ ಕೆ.ಜೆ. ರೇವಣಸಿದ್ದಪ್ಪ, ಸದಸ್ಯರಾದ ಕೆ.ಬಿ. ಸಿದ್ಧನಗೌಡ, ಟಿ.ಎಸ್. ಬಸವರಾಜ್, ಎಚ್.ಎ. ಪುನೀತ್ ಕುಮಾರ್, ಆರ್.ಎಂ. ನೀಲಮ್ಮ, ಸರಸ್ವತಮ್ಮ, ಜರೀನಾಬಿ, ತಾ.ಪಂ. ಇಒ ಎಸ್.ಎಲ್. ಗಂಗಾಧರಮೂರ್ತಿ, ಪಿಡಿಒ ಜಗದೀಶ್ ಕಂಬಳಿ, ಸಿಡಿಪಿಒ ಮಹಾಂತಸ್ವಾಮಿ ಪೂಜಾರ್, ಬಿಇಒ ಜಿ.ಇ. ರಾಜೀವ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್. ರುದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೆಂಚಪ್ಪ ಆರ್. ಬಂತಿ, ರಾಜಸ್ವ ನಿರೀಕ್ಷಕ ಬಿ.ಎಂ. ರಮೇಶ್, ಮಂಜುನಾಥ್ ಕೆ. ಇಂಗಳಗೊಂದಿ, ಜಿ.ಎಸ್. ಅಜ್ಜಪ್ಪ, ಸಿ.ಟಿ. ಸುರೇಶ್, ದೊಡ್ಡ ಬಸವರಾಜ್, ಮೃತ್ಯುಂಜಯ, ರವಿಕಿರಣ್ ಇನ್ನಿತರರಿದ್ದರು.