ವಾರಾಂತ್ಯದ ಲಾಕ್‌ಡೌನ್‌ಗೆ ಸ್ಪಂದನೆ

ಹರಿಹರ, ಏ.24- ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ರೋಗ ತಡೆಗೆ ಸರ್ಕಾರ ವಾರಾಂತ್ಯದ ಲಾಕ್‌ಡೌನ್ ಘೋಷಣೆ ಮಾಡಿದ್ದು, ನಗರದ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಲಾಕ್‌ಡೌನ್‌ಗೆ ಸಂಪೂರ್ಣ ಬೆಂಬಲ ನೀಡಿದರು.

ಸರ್ಕಾರ ಶನಿವಾರ ಮತ್ತು ಭಾನುವಾರ ಲಾಕ್ ಡೌನ್ ಘೋಷಣೆ ಮಾಡಿದ್ದರಿಂದಾಗಿ ನಗರದಲ್ಲಿ ಬೆಳಗ್ಗೆಯಿಂದ ಔಷಧಿ ಅಂಗಡಿ ಬಿಟ್ಟರೆ ಯಾವುದೇ ರೀತಿಯ ಅಂಗಡಿ ಮುಂಗಟ್ಟುಗಳು ತೆರೆದಿರಲಿಲ್ಲ.  ಅಲ್ಲೊಂದು, ಇಲ್ಲೊಂದು ಬಸ್ ಸಂಚಾರವಿದ್ದು ಟ್ಯಾಕ್ಸಿ, ಆಟೋ, ಗೂಡ್ಸ್ ವಾಹನಗಳು ಕೂಡ ರಸ್ತೆಗೆ ಇಳಿಯದೆ ಬಂದ್‌ಗೆ ಸಹಕಾರ ನೀಡಿದವು. ಸಾರ್ವಜನಿಕರು ಸಹ ಹೆಚ್ಚಾಗಿ ಓಡಾಡುವುದು ಎಲ್ಲಿಯೂ ಕಂಡು ಬಂದಿರುವುದಿಲ್ಲ. ಮನೆಯಿಂದ ಹೊರಗಡೆ ಬರದೆ ಮನೆಯಲ್ಲೇ ಇದ್ದು ಸ್ವಯಂ ಪ್ರೇರಿತರಾಗಿ ಲಾಕ್‌ಡೌನ್‌ಗೆ  ಬೆಂಬಲ ನೀಡಿದರು.

ಬೆಳಗ್ಗೆಯಿಂದಲೇ ತಹಶೀಲ್ದಾರ್‌ ಕೆ.ಬಿ.ರಾಮಚಂದ್ರಪ್ಪ, ಪೌರಾಯುಕ್ತೆ ಎಸ್. ಲಕ್ಷ್ಮಿ, ಸಿಪಿಐ ಸತೀಶ್ ಕುಮಾರ್, ಪಿಎಸ್ಐ ಬಸವರಾಜ್ ತೆಲಿ ನಗರದಲ್ಲಿ ಅಲ್ಲೊಂದು, ಇಲ್ಲೊಂದು ತೆರೆದಿದ್ದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲು ಮುಂದಾಗಿದ್ದರು.

error: Content is protected !!