ಹರಪನಹಳ್ಳಿ, ಫೆ. 27 – ಮಧ್ಯ ಕರ್ನಾಟಕದ ಐತಿಹಾಸಿಕ ಪ್ರಸಿದ್ದ ಉಚ್ಚೆಂಗೆಮ್ಮ ದೇವಿ ಸನ್ನಿಧಿಯಲ್ಲಿ ಈ ಬಾರಿಯ ಭಾರತ ಹುಣ್ಣಿಮೆ ಆಚರಣೆಯನ್ನು ಸ್ಥಳೀಯರಿಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಎತ್ತಿನಗಾಡಿ, ಟ್ರ್ಯಾಕ್ಟರ್ ಸೇರಿದಂತೆ ಯಾವುದೇ ವಾಹನಗಳ ಮೂಲಕ ಕ್ಷೇತ್ರಕ್ಕೆ ಬೇರೆ ಗ್ರಾಮಗಳ ಜನರು ಬಾರದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಹುಣ್ಣಿಮೆ ಅಂಗವಾಗಿ ದೇವಸ್ಥಾನದಲ್ಲಿ ಎಂದಿನಂತೆ ಸಂಪ್ರದಾಯದ ಪೂಜೆ. ಧಾರ್ಮಿಕ ಕಾರ್ಯಗಳು ಜರುಗಿದವು.
February 1, 2025