ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ದೇವರಾಜ್
ದಾವಣಗೆರೆ, ಮಾ. 3- ವಿಜ್ಞಾನವು ಮಾನವನ ಆಶೋತ್ತರಗಳನ್ನು ಈಡೇರಿಸುವ ದಿಕ್ಕಿನಲ್ಲಿ ಸಾಗಿದೆ. ನಿತ್ಯ ಜೀವನದಲ್ಲಿ ವಿಜ್ಞಾನದ ಮಹತ್ವ ಹೆಚ್ಚಾಗಿದೆ ಎಂದು ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ ಹೇಳಿದ್ದಾರೆ.
ಅವರು ನಗರದ ಐಸಿಎಆರ್ – ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು.
ಡಾ. ಡಿ.ಆರ್. ನಟರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರ ಶೋಷಣೆ ನಡೆಯುತ್ತಿದೆ. ಇದನ್ನು ತಡೆಯಲು ಹಾಗೂ ಸಮಾಜದಲ್ಲಿನ ಮೌಢ್ಯತೆಯನ್ನು ಹೋಗಲಾಡಿಸಲು ವಿಜ್ಞಾನದ ಅವಶ್ಯಕತೆ ಇದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಸಿ.ಟಿ. ಚಂದ್ರಪ್ಪ, ವಿಸ್ತರಣಾ ತಜ್ಞ ರಘುರಾಜ್ ಮತ್ತಿತರರು ಭಾಗವಹಿಸಿದ್ದರು.