ದಾವಣ ಗೆರೆ, ಮಾ.4- ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಇವರು ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮ ದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಡಿಯಲ್ಲಿ ಕಡಲೆ ಬೆಳೆಯ ಸಮಗ್ರ ಬೆಳೆ ನಿರ್ವಹಣೆ ಮುಂಚೂಣಿ ಪ್ರಾತ್ಯಕ್ಷಿಕೆ, ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ್ ಮಾತನಾಡುತ್ತಾ, ಕಡಲೆಯಲ್ಲಿ ಪಲ್ಸ್ ಮ್ಯಾಜಿಕ್ ಬಳಕೆಯಿಂದ ಉದುರುವುದು ಕಡಿಮೆಯಾಗಿ ಹಾಗೂ ಸರಿಯಾದ ಸಮಯಕ್ಕೆ ಸಸ್ಯ ಸಂರಕ್ಷಣೆ ಕ್ರಮಗಳನ್ನು ಅನುಸರಿಸುವುದರಿಂದ ಅಧಿಕ ಇಳುವರಿ ಪಡೆಯಬಹುದು. ಅಕಾಲಿಕ ಮಳೆಯಿಂದಾಗಿ ಇಳುವರಿ ಮೇಲೆ ಪರಿಣಾಮ ಬೀರಿದೆ. ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರು ಹಾಗೂ ಗ್ರಾ.ಪಂ ಸದಸ್ಯ ಮಧು, ಕೇಂದ್ರದ ಮಣ್ಣು ವಿಜ್ಞಾನಿ ಸಣ್ಣ ಗೌಡರು ಭಾಗವಹಿಸಿದ್ದರು