ಶಿರಮಗೊಂಡನಹಳ್ಳಿಯಲ್ಲಿ ಲಸಿಕೆ

ದಾವಣಗೆರೆ, ಮೇ 2- ಸಮೀಪದ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ 45 ವರ್ಷ ಮೇಲ್ಪಟ್ಟ 100 ಜನರಿಗೆ ಕೊರೊನಾ ಲಸಿಕೆ ನೀಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹದಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಶಿರಮಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಗ್ರಾ.ಪಂ.ನಿಂದ ಕೋವಿಡ್‌ ನಿಯಮಗಳನ್ನು ಪಾಲಿಸಲಾಗಿತ್ತು. ಗ್ರಾ.ಪಂ. ವ್ಯಾಪ್ತಿಯಲ್ಲಿ 45 ವರ್ಷ ಮೇಲ್ಪಟ್ಟ 947 ಜನರು ಇದ್ದು, ಎಲ್ಲರಿಗೂ ಲಸಿಕೆ ನೀಡಲಾಗುವುದೆಂದು ವೈದ್ಯಾಧಿಕಾರಿ ಧನಂಜಯ ತಿಳಿಸಿದ್ದಾರೆ. ಗ್ರಾ.ಪಂ. ಅಧ್ಯಕ್ಷರಾದ ವಿನುತ ಸುರೇಶಬಾಬು, ಪಿಡಿಓ ಕಾತ್ಯಾಯಿನಿ ಜಿ.ಎಲ್‌. ಮತ್ತಿತರರು ಇದ್ದರು.

error: Content is protected !!