ಹರಪನಹಳ್ಳಿ, ಮೇ 1- ತಾಲ್ಲೂಕಿನ ವಿವಿಧೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಭಾರೀ ನಷ್ಟವಾಗಿದೆ. ತಾಲ್ಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಸುರಿದ ಮಳೆಗೆ ಭಾರೀ ಗಾತ್ರದ ಮರಗಳು ನೆಲಕ್ಕು ರುಳಿವೆ. ವಿದ್ಯುತ್ ಕಂಬಗಳು ಹಾಗೂ ತಂತಿಗಳು ನೆಲಕ್ಕೆ ಬಿದ್ದು, ವಿದ್ಯುತ್ ಕಡಿತಗೊಂಡಿದೆ. ಗ್ರಾಮದ ಕೆಲಮನೆಗಳ ತಗಡುಗಳು ಗಾಳಿಗೆ ಹಾರಿ ಹೋಗಿವೆ. ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಕೂಡ ಬಿರುಗಾಳಿ ಸಮೇತ ಮಳೆಯಾಗಿದೆ. ಬಿಸಿಲಿನಿಂದ ತತ್ತರಿಸಿದ ಜನಕ್ಕೆ ಈ ಮಳೆ ತಂಪೆರೆದಂತಾಗಿದೆ.
January 9, 2025