ದಾವಣಗೆರೆ, ಮೇ.1 – ವಾರ್ಡ್ ನಂ.35 ರಲ್ಲಿ ಕಾರ್ಮಿಕ ದಿನಾಚರಣೆಯನ್ನು ಪೌರ ಕಾರ್ಮಿಕರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ ಸನ್ಮಾನ ಮಾಡುವುದರ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡ್‌ನ ಸದಸ್ಯೆ ಸವಿತಾ ಹುಲ್ಮನಿ ಗಣೇಶ್, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯ ಮಂಜುನಾಥ್ ಗಡಿಗುಡಾಳ್, ಕಾಂಗ್ರೆಸ್ ಮುಖಂಡ ಗಣೇಶ್, ಹೆಲ್ತ್ ಇನ್ಸ್‍ಪೆಕ್ಟರ್‍ಗಳಾದ ನೀಲಪ್ಪ, ಶಶಿಧರ್ ಇನ್ನೂ ಮುಂತಾದವರು ಹಾಜರಿದ್ದರು.
December 27, 2024