ದಾವಣಗೆರೆ, ಮಾ. 5- ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ನ (ಐಎನ್.ಟಿಯು.ಸಿ) ದಾವಣಗೆರೆ ಜಿಲ್ಲಾಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ.ಎಂ. ಮಂಜುನಾಥ್ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ|| ಎಸ್.ಎಸ್. ಪ್ರಕಾಶಂ ಆದೇಶ ಹೊರಡಿಸಿದ್ದಾರೆ.
ನೂತನ ಜಿಲ್ಲಾಧ್ಯಕ್ಷ ಮಂಜುನಾಥ್ ಅವರು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವರಾದ ಶಾಮನೂರು ಮಲ್ಲಿಕಾರ್ಜುನ್ ಅವರುಗಳನ್ನು ಭೇಟಿ ಮಾಡಿ ತಮ್ಮ ಆಯ್ಕೆಗೆ ಸಹಕರಿಸಿದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.