ದಾವಣಗೆರೆ, ಮಾ. 2 – ನಗರದ ಹೊಸ ಆರ್‌ಟಿಒ ಕಚೇರಿ ಬಳಿ ತುಮಕೂರಿನ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಯ ಪುತ್ಥಳಿ ನಿರ್ಮಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ.ವೀರೇಶ್ ಅವರಿಗೆ ಮನವಿ ಸಲ್ಲಿಸುವ ಜೊತೆಗೆ ಸಿದ್ದಗಂಗಾ ಶ್ರೀಗಳ ಭಾವಚಿತ್ರ ನೀಡುವ ಮೂಲಕ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಶಂಕರ್ ಶಿರೇಕರ್, ಕಾರ್ಯದರ್ಶಿ ಕುಮಾರ್, ಅಶೋಕ್, ಸೋಮಶೇಖರ್ ಕಲಾಲ್ ಮುಂತಾದವರು ಉಪಸ್ಥಿತರಿದ್ದರು.