ನೂತನ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ

ದಾವಣಗೆರೆ, ಮಾ.7- ನೂತನ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಹಾಗೂ ದೀಪದಾನ ಸಮಾರಂಭವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಿವಾಕರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ದಾವಣಗೆರೆ ವಿವಿ ಶಿಕ್ಷಣ ನಿಕಾಯದ ಡೀನ್ ಹಾಗೂ ಸ್ನಾತಕೋತ್ತರ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಕೆ. ವೆಂಕಟೇಶ್, ಶಿಕ್ಷಕರು ದೇಶದ ಸಂಪತ್ತು. ಶಿಕ್ಷಕರಾದವರು ತಮ್ಮ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಕರೆ ನೀಡಿದರು.

ಪ್ರಶಿಕ್ಷಣಾರ್ಥಿ ಜೆ.ಆರ್. ಅದಿತಿ ಪ್ರಾರ್ಥಿಸಿದರು. ಪ್ರಾಚಾರ್ಯ ಡಾ. ಎಸ್. ದಿವಾಕರ್ ನಾಯ್ಕ ಸ್ವಾಗತಿಸಿದರು. ಉಪನ್ಯಾಸಕರಾದ ಹೆಚ್.ಸಿ. ರವಿಕುಮಾರ್ ವರದಿ ವಾಚಿಸಿದರು. ಕೆ.ವಿ.ಸುರೇಶ್ ವಂದಿಸಿದರು. ಡಿ.ಮಂಜುಳಾ ನಿರೂಪಿಸಿದರು. 

 

error: Content is protected !!