ದಾವಣಗೆರೆ, ಮಾ. 9- ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ ಸಭಾಂಗಣದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾದ ಡಾ. ರಾಜೇಶ್ವರಿ ಜೆ. ಅಣ್ಣಗೇರಿ ಮಾತನಾಡಿದರು. ಪ್ರಾಂಶುಪಾಲ ಡಾ. ವೈ. ವಿಜಯ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಅಮೃತ, ಅನುಶ್ರೀ ಪ್ರಾರ್ಥಿಸಿದರು. ಮಹಿಳಾ ಸಬಲೀಕರಣದ ನಿರ್ದೇಶಕಿ ವೆಂಕಟಸುಮನಾ, ಆಡಳಿತಾಧಿಕಾರಿ ವೈ.ಯು. ಸುಭಾಷ್‌ಚಂದ್ರ ಉಪಸ್ಥಿತರಿದ್ದರು.