ಮಲೇಬೆನ್ನೂರು, ಮಾ.11- ಕಡರನಾಯ್ಕನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಉದ್ಘಾಟನೆ ಹಾಗೂ ಸ್ವಾಮಿಯ ಪುನರ್ ಪ್ರತಿಷ್ಠಾಪನೆ ಹಾಗೂ ನೂತನ ಕವಚಧಾರಣೆ ಕಾರ್ಯಕ್ರಮ ಸೋಮವಾರ ಜರುಗಿತು.
ಈ ಸಂಬಂಧ ಅಭಿಷೇಕ, ಪೂಜೆ, ಹವನ ಕಾರ್ಯಕ್ರಮಗಳಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್ ಮತ್ತು ಗ್ರಾ.ಪಂ. ಅಧ್ಯಕ್ಷ ಭರಮಗೌಡ, ಉಪಾಧ್ಯಕ್ಷೆ ಗಿರಿಜಮ್ಮ, ಗ್ರಾ.ಪಂ. ಮಾಜಿ ಅಧ್ಯಕ್ಷರು, ಹಾಲಿ ಸದಸ್ಯ ವಿ. ಕುಬೇರಪ್ಪ ಇನ್ನಿತರರು ಪಾಲ್ಗೊಂಡಿದ್ದರು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.