ಮಲೇಬೆನ್ನೂರು, ಮಾ.11- ಇಲ್ಲಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಪಟ್ಟಣದಲ್ಲಿ ದ್ವಾದಶ ಜ್ಯೋತಿರ್ಲಿಂಗಗಳ ಸದ್ಭಾವನಾ ಶಾಂತಿಯಾತ್ರೆ ಹಾಗೂ ಬೆಳ್ಳಿ ರಥದಲ್ಲಿ 8 ಅಡಿ ಎತ್ತರದ ಬೃಹತ್ ಶಿವಲಿಂಗದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಡೊಳ್ಳು, ಸಮಾಳ ಸೇರಿದಂತೆ ವಿವಿಧ ಕಲಾ ಮೇಳಗಳು ಮೆರವಣಿಗೆಗೆ ಮೆರಗು ತಂದವು. ಮುಂಡಗೋಡು ಕೇಂದ್ರದ ಬ್ರಹ್ಮಾಕುಮಾರಿ ಗಂಗಾಂಬಿಕೆ, ಮಲೇಬೆನ್ನೂರು ಕೇಂದ್ರದ ಬ್ರಹ್ಮಾಕುಮಾರಿ ಮಂಜುಳಾ ಮೆರವಣಿಗೆಯ ನೇತೃತ್ವ ವಹಿಸಿದ್ದರು. ಎ.ಎಸ್.ಐ. ಬಸವರಾಜಪ್ಪ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ರಾತ್ರಿ ಜಾಗರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.