ಪುತ್ತೂರು, ಮಾ. 12 – ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಏರ್ಪಡಿಸಿದ್ದ 28ನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ ಸ್ಪರ್ಧೆಗೆ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು. ನಂತರ ಮಾತನಾಡಿದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಾನಪದ ಸ್ಪರ್ಧೆಯಲ್ಲೊಂದಾದ ಕಂಬಳ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿ ರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಇಂತಹ ಸ್ಪರ್ಧೆಗಳನ್ನು ಆಯೋಜಿಸುತ್ತಿರುವ ವಿನಯ್ ಕುಮಾರ್ ಸೊರಕೆ ಮತ್ತು ಶಕುಂತಲಾ ಶೆಟ್ಟಿ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ವಿನಯ್ ಕುಮಾರ್ ಸೊರಕೆ, ರಮಾನಾಥ್ ರೈ, ಅಭಯ್ ಚಂದ್ರ ಜೈನ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಮುಖ್ಯಮಂತ್ರಿ ಚಂದ್ರು ಮತ್ತಿತರರಿದ್ದರು.