ದಾವಣಗೆರೆ, ಮಾ.13- ನಗರದ ಜಿಲ್ಲಾ ಕಮಾಂಡೆಂಟ್ ಕಚೇರಿ, ಗೃಹರಕ್ಷಕ ದಳದ ವತಿಯಿಂದ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಂಬಾಕು ಹಾಗೂ ದುಷ್ಪರಿಣಾಮಗಳು ಮತ್ತು ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ. ಬಿ.ಹೆಚ್. ವೀರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತರಬೇತಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್ ತರಬೇತಿ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ಕೆ.ಪಿ. ದೇವರಾಜ್, ಸರಸ್ವತಿ, ಸಿಬ್ಬಂದಿಗಳು, ಅಧಿಕಾರಿಗಳು ಭಾಗವಹಿಸಿದ್ದರು. ಗೃಹರಕ್ಷಕ ದಳ ಘಟಕದ ಅಧಿಕಾರಿ ಕೆ.ಎಸ್. ಅಮರೇಶ್ ಸ್ವಾಗತಿಸಿ, ನಿರೂಪಿಸಿದರು.