ಕಕ್ಕರಗೊಳ್ಳದಲ್ಲಿ ಕೋವಿಡ್‌ ತಪಾಸಣಾ ಶಿಬಿರ

ದಾವಣಗೆರೆ, ಮಾ.13- ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ದಿನಾಂಕ 12.03.2021 ರಂದು ಶಾಲೆಯ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋವಿಡ್‌ ತಪಾಸಣಾ ಶಿಬಿರ ನಡೆಯಿತು.

ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ದೇವರಾಜ್‌ ಶಿಬಿರ ಉದ್ಘಾಟಿಸಿದರು. ಶಿಕ್ಷಣ ಸಂಯೋಜಕ ನೋಡಲ್‌ ಅಧಿಕಾರಿ ಶ್ರೀನಿವಾಸ್‌, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ಗಾಯತ್ರಿ ಹಾಗೂ ಆರೋಗ್ಯ ಸಿಬ್ಬಂದಿಗಳು, ಶಾಲೆಯ ಪ್ರೌಢ ಶಾಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

error: Content is protected !!