ರಾಮತೀರ್ಥ : ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ

ಮಲೇಬೆನ್ನೂರು, ಮಾ.16- ರಾಮತೀರ್ಥ ಗ್ರಾಮದಲ್ಲಿ 12 ಲಕ್ಷ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಸ್. ರಾಮಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯೆ ಲಕ್ಷ್ಮಿ ಹಲಸಬಾಳು ಮಹಾಂ ತೇಶ್ ಅನುದಾನದಲ್ಲಿ ನಿರ್ಮಿಸಿರುವ ಹೈಮಾಸ್ಟ್ ದೀಪವನ್ನು ಶಾಸಕರು ಉದ್ಘಾಟಿಸಿದರು. ತಾ.ಪಂ. ಸದಸ್ಯೆ ಲಕ್ಷ್ಮಿ ಮಹಾಂತೇಶ್, ತಾ.ಪಂ. ಮಾಜಿ ಸದಸ್ಯ ಬೆಳ್ಳೂಡಿ ಬಸವರಾಜ್, ರಾಜನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಚೈತ್ರ ಲಂಕೇಶ್ ಮತ್ತು ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

error: Content is protected !!