ದಾವಣಗೆರೆ, ಮಾ.21 – ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಇವರಿಂದ ನಿಕ್ರಾ ಗ್ರಾಮವಾದ ಅಗಸನಕಟ್ಟೆ ಯಲ್ಲಿ ಕಿಸಾನ್ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಡಾ. ಶ್ರೀನಿವಾಸ್ ರೆಡ್ಡಿ, ನೋಡಲ್ ಅಧಿಕಾರಿ, ಅಟಾರಿ, ಬೆಂಗಳೂರು ಇವರು ಕಾರ್ಯಕ್ರಮ ಉದ್ಘಾಟಿಸಿದರು. ನಿಕ್ರಾ ಯೋಜನೆಯ ಸಂಪೂರ್ಣ ಉಪಯೋಗವನ್ನು ಗ್ರಾಮಸ್ಥರು ಪಡೆದುಕೊಂಡರು. ನೀರು ಮತ್ತು ಮಣ್ಣಿನ ಸಂರಕ್ಷಣೆ ಬಗ್ಗೆ ಹೆಚ್ಚು ಮಾಹಿತಿಯನ್ನು ಪಡೆದುಕೊಂಡು ಮುಂದಿನ ದಿನಗಳಲ್ಲಿ ಈ ಕೆಲಸವನ್ನು ಮುಂದುವರೆಸಿಕೊಂಡು ಹೋಗ ಬೇಕೆಂದು ಸಲಹೆ ನೀಡಿದರು. ಕಾರ್ಯ ಕ್ರಮದಲ್ಲಿ ಕೇಂದ್ರದ ಮುಖ್ಯಸ್ಥ ಡಾ. ದೇವರಾಜ್ ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿಯನ್ನು ಬೆಳೆಯುವುದರಿಂದ ರೈತರು ಆದಾಯದ ಜೊತೆಗೆ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ವಿಸಿಆರ್ ಎಂಸಿ ಅಧ್ಯಕ್ಷ ಚನ್ನಪ್ಪ ಆರ್ಸಿ ನಿಕ್ರಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ ಎಂದರು. ಗ್ರಾಮ ಪಂಚಾಯತಿ ಸದಸ್ಯ ಶಿವಕುಮಾರ್, ಬಸವರಾಜ್ ಹಾಗೂ ಪ್ರಗತಿಪರ ರೈತರು, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗವಹಿಸಿದ್ದರು.